
ಬೆಳಗಾವಿ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಬೆಳಗಾವಿಗೆ ಶಿಫ್ಟ್ ಆಗಿದೆ. ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಬೆಳಗಾವಿಯಲ್ಲಿಯೇ ಟಿಕೆಟ್ ವಿಚಾರ ಫೈನಲ್ ಮಾಡೋಣ ಎಂದು ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಸುರಾನಾ ಬೆಂಗಳೂರಿನಿಂದ ಬೆಳಗಾವಿಗೆ ತೆರಳಿದ್ದು, ಇಂದು ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಯಲ್ಲಿ ಬೆಳಗಾವಿ ಕ್ಷೇತ್ರಗಳ ಟಿಕೆಟ್ ಪ್ರಮುಖವಾಗಿ ಅಥಣಿ ಟಿಕೆಟ್ ಫೈನಲ್ ಆಗಲಿದೆ.

