HomeKarnatakaBIG NEWS: ಸಂಸದೀಯ ಮಂಡಳಿ ಸಭೆಯಲ್ಲಿ BJP ಅಭ್ಯರ್ಥಿಗಳ ಪಟ್ಟಿ ಫೈನಲ್; ಸಿಎಂ ಬೊಮ್ಮಾಯಿ

BIG NEWS: ಸಂಸದೀಯ ಮಂಡಳಿ ಸಭೆಯಲ್ಲಿ BJP ಅಭ್ಯರ್ಥಿಗಳ ಪಟ್ಟಿ ಫೈನಲ್; ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅಭ್ಯರ್ಥಿಗಳ ಬಗ್ಗೆ ಎಲ್ಲಾ ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಿನ್ನೆ, ಮೊನ್ನೆ ಜಿಲ್ಲಾ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದ್ದೇವೆ. ನಾಳೆ, ನಾಡಿದ್ದು ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ. ಸಂಸದೀಯ ಮಂಡಳಿಯ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ಎಸ್ಸಿ, ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅಲ್ಲದೇ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಶಿಫಾರಸು ಕೂಡ ಮಾಡಿದ್ದೇವೆ. ಈ ಮೂಲಕ ಎಸ್ ಸಿ/ಎಸ್ ಟಿ ಸಮುದಾಯದ ಬೇಡಿಕೆ ಈಡೇರಿಸಿದ್ದೇವೆ. ಎಲ್ಲಾ ಸಮುದಾಯಗಳಿಗೂ ನಮ್ಮ ಸರ್ಕಾರ ಮೀಸಲಾತಿ ನೀಡಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular