alex Certify ಬಿಜೆಪಿ ನಾಯಕರಿಗೆ ಕಗ್ಗಂಟಾದ ಬೆಳಗಾವಿ ಟಿಕೆಟ್ ಹಂಚಿಕೆ ವಿಚಾರ; ಈರಣ್ಣ ಕಡಾಡಿ ವಿರುದ್ಧ ಏಕವಚನದಲ್ಲೇ ರಮೇಶ್ ಜಾರಕಿಹೊಳಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ನಾಯಕರಿಗೆ ಕಗ್ಗಂಟಾದ ಬೆಳಗಾವಿ ಟಿಕೆಟ್ ಹಂಚಿಕೆ ವಿಚಾರ; ಈರಣ್ಣ ಕಡಾಡಿ ವಿರುದ್ಧ ಏಕವಚನದಲ್ಲೇ ರಮೇಶ್ ಜಾರಕಿಹೊಳಿ ವಾಗ್ದಾಳಿ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಿಜೆಪಿ ಇನ್ನೂ ಅಭ್ಯರ್ಥಿಗಳ ಆಯ್ಕೆಯನ್ನು ಮಾಡುತ್ತಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಟಿಕೆಟ್ ಹಂಚಿಕೆ ವಿಚಾರ ಬಿಜೆಪಿ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ ಎಂದು ಹೇಳಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರಾಬಲ್ಯ ಹೊಂದಿರುವ ಜಾರಕಿಹೊಳಿ ಕುಟುಂಬ ಹಾಗೂ ಬಿಜೆಪಿ ಲಿಂಗಾಯತ ನಾಯಕರ ನಡುವೆ ಟಿಕೆಟ್ ಪೈಪೋಟಿ ನಡೆದಿದ್ದು, ಉಭಯ ಬಣಗಳೂ ಸಹ ತಮ್ಮ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದಾರೆ. ಅದರಲ್ಲೂ ಅಥಣಿ ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಆಪ್ತ ಮಹೇಶ್ ಕುಮಟಳ್ಳಿ ಅವರಿಗೇ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಈ ಬಿಕ್ಕಟ್ಟು ಭಾನುವಾರದಂದು ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಪ್ರತಿಧ್ವನಿಸಿದ್ದು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಈ ಸಭೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ, ಗೋಕಾಕ್ ಮತ್ತು ಅರಭಾವಿ ಕ್ಷೇತ್ರದಲ್ಲಿ ಪಂಚಮಸಾಲಿ ಸಮಾಜ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಪೈಕಿ ಒಂದು ಕ್ಷೇತ್ರ ಪಂಚಮಸಾಲಿ ಅಭ್ಯರ್ಥಿಗೆ ಟಿಕೆಟ್ ನೀಡಿ ಮೀಸಲು ಕ್ಷೇತ್ರವಾಗಿರುವ ಯಮಕನಮರಡಿಯಲ್ಲಿ ಬಾಲಚಂದ್ರ ಜಾರಕಿಹೊಳಿಯವರನ್ನು ಕಣಕ್ಕಿಳಿಸುವುದು ಸೂಕ್ತ ಎಂದರು ಎನ್ನಲಾಗಿದೆ.

ಇದರಿಂದ ಸಿಡಿದೆದ್ದ ರಮೇಶ್ ಜಾರಕಿಹೊಳಿ, ನಾವು ಎಲ್ಲಿ ನಿಲ್ಲಬೇಕೆಂದು ಹೇಳಲು ನೀನ್ಯಾರು. ಜಾರಕಿಹೊಳಿ ಸಹೋದರರ ಕುರಿತು ಮಾತನಾಡಬೇಡ. ಪಕ್ಷದ ವಿಚಾರ ಮಾತ್ರ ಮಾತನಾಡು ಎಂದರಂತೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಹಾಗೂ ಧರ್ಮೇಂದ್ರ ಪ್ರಧಾನ್ ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...