ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲವಾದರೂ ಸಹ ಆಕಾಂಕ್ಷಿಗಳು ಟಿಕೆಟ್ ಗಾಗಿ ಲಾಬಿ ಆರಂಭಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ದೀಪಕ್ ದೊಡ್ಡಯ್ಯ, ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡದೆ ನನಗೇ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿರುವ ಅವರು, ರಾಜ್ಯದಲ್ಲೂ ಗುಜರಾತ್ ಮಾದರಿಯನ್ನು ಅನುಸರಿಸಿ ನನಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದಾರೆ.