
ಜೆಡಿಎಸ್ ಶಾಸಕರಾಗಿದ್ದ ಶಿವಲಿಂಗೇಗೌಡ ಭಾನುವಾರದಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ಇಂದು ಅಂಗೀಕರಿಸಲಾಗಿದೆ. ಈ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದರು.
ಆದರೆ ತಮ್ಮ ಸ್ವಕ್ಷೇತ್ರ ಅರಸೀಕೆರೆಯಲ್ಲಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತವಾಗಿದ್ದು, ಏಪ್ರಿಲ್ 9ರಂದು ನಡೆಯುವ ಸಮಾವೇಶದಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.

