HomeKarnatakaBIG NEWS: ದೇವೇಗೌಡರು ವಾಪಸ್ ಆದ ಬಳಿಕ ಹಾಸನ ಟಿಕೆಟ್ ನಿರ್ಧಾರ; ಏಪ್ರಿಲ್ 19 ರಂದು...

BIG NEWS: ದೇವೇಗೌಡರು ವಾಪಸ್ ಆದ ಬಳಿಕ ಹಾಸನ ಟಿಕೆಟ್ ನಿರ್ಧಾರ; ಏಪ್ರಿಲ್ 19 ರಂದು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಎಂದ HDK

ಹಾಸನ: ಹಾಸನ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಈಗಲೂ ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ಅವರು ಇಂದು ವಾಪಸ್ ಆಗಲಿದ್ದು, ಅವರು ಬಂದ ಬಳಿಕ ಟಿಕೆಟ್ ವಿಚಾರ ಅಂತಿಮಗೊಳ್ಳಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನದಿಂದ ಜೆಡಿಎಸ್ ಟಿಕೆಟ್ ಸಿಗದಿದ್ದರೆ ಭವಾನಿ ರೇವಣ್ಣ ಪಕ್ಷೇತರವಾಗಿ ಸ್ಪರ್ಧೆ ಎಂಬ ಸುದ್ದಿ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಈ ಬಗ್ಗೆ ನನಗೆ ಗೊತ್ತಿಲ್ಲ, ಅದು ಕೇವಲ ವದಂತಿ ಇರಬಹುದು ಎಂದರು.

ಏಪ್ರಿಲ್ 19ರಂದು ರಾಮನಗರ ಜಿಲ್ಲೆ ಚನ್ನಪಟ್ಟಣದಿಂದ ನಾಮಪತ್ರ ಸಲ್ಲಿಕೆ ಮಾಡುತ್ತೇನೆ. 20 ಹಾಗೂ 21ರಂದು ಎರಡು ದಿನ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತೇನೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular