ದೈನಂದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಇದರ ಮಧ್ಯೆ ಹೋಟೆಲ್ ಊಟ, ತಿಂಡಿ ತಿನಿಸುಗಳ ಬೆಲೆಯಲ್ಲೂ ಸಹ ಏರಿಕೆಯಾಗಲಿದೆ ಎಂಬ ಮಾತು ಕೇಳಿ ಬರುತ್ತಿತ್ತು.
ಹೀಗಾಗಿ ಜನಸಾಮಾನ್ಯರು ಮತ್ತೊಂದು ಹೊರೆ ಬೀಳಲಿದೆ ಎಂಬ ಆತಂಕದಲ್ಲಿದ್ದರು. ಇದೀಗ ಅಂತವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಸದ್ಯಕ್ಕೆ ಊಟ, ತಿಂಡಿ ತಿನಿಸುಗಳ ಬೆಲೆಯನ್ನು ಹೆಚ್ಚಿಸದಿರಲು ತೀರ್ಮಾನಿಸಲಾಗಿದೆ.
ಸೋಮವಾರದಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಹೇಳಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಕಚ್ಚಾ ವಸ್ತುಗಳ ದರಗಳ ಬದಲಾವಣೆ ಗಮನಿಸಿ ಬಳಿಕ ಈ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.