ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಹಲವರು ತಮ್ಮ ತಮ್ಮ ಇಷ್ಟದ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ.
ಇದೀಗ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಸೋಮವಾರದಂದು ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತರಾವ್ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡಿದ್ದಾರೆ.