
ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ ಡಿ.ಕೆ.ಶಿವಕುಮಾರ್ ಹಣ ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ದೂರು ದಾಖಲಾದ ಬಳಿಕ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿದೆ. ಕೋರ್ಟ್ ಆದೇಶದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

