
ಇದೀಗ ಸಿದ್ದರಾಮಯ್ಯ ತಮ್ಮ ಹೇಳಿಕೆ ಬಗ್ಗೆ ಉಲ್ಟಾ ಹೊಡೆದಿದ್ದು, ನನ್ನ ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಿರುಚಲಾಗಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ಕೊಟ್ಟಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಯಲ್ಲಿ ಸಿಎಂ ಆಯ್ಕೆಯಾಗಲಿದೆ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

