HomeKarnatakaBIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್; ಸಿಎಂ ಹೇಳಿದ್ದೇನು....?

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್; ಸಿಎಂ ಹೇಳಿದ್ದೇನು….?

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುವುದು ನಿಶ್ಚಿತ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೆಲ ಕ್ಷೇತ್ರಗಳಲ್ಲಿ ಅಚ್ಚರಿ ಫಲಿತಾಂಶ ಬರಲಿದೆ. ಕಾರ್ಯಕರ್ತರು, ನಾಯಕರು ಆತ್ಮವಿಶ್ವಾಸದಲ್ಲಿದ್ದಾರೆ ಎಂದರು.

ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಇಂದು ಬಿಜೆಪಿ ರಾಜ್ಯ ಸಮಿತಿ ಸಭೆ ನಡೆಯುತ್ತಿದೆ. ಸಭೆ ಬಳಿಕ ಕೇಂದ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಕಳುಹಿಸಲಾಗುವುದು. ಏಪ್ರಿಲ್ 8ರಂದು ಕೇಂದ್ರದಲ್ಲಿ ಚರ್ಚೆಯಾಗಿ ಅಂದು ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular