HomeKarnatakaBIG NEWS: ಇಂದಿನಿಂದ ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ಆರಂಭ; ಮೇ ಮೊದಲ ವಾರ ಫಲಿತಾಂಶ...

BIG NEWS: ಇಂದಿನಿಂದ ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ಆರಂಭ; ಮೇ ಮೊದಲ ವಾರ ಫಲಿತಾಂಶ ಪ್ರಕಟ ನಿರೀಕ್ಷೆ

ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಇಂದಿನಿಂದ ಆರಂಭವಾಗಿದ್ದು, ರಾಜ್ಯದಾದ್ಯಂತ 65 ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 25,000 ಉಪನ್ಯಾಸಕರು 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲಿದ್ದಾರೆ.

ಒಟ್ಟು 20 ದಿನಗಳ ಕಾಲ ಮೌಲ್ಯಮಾಪನ ಕಾರ್ಯ ನಡೆಯಲಿದ್ದು, 37 ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಎಲ್ಲ ಕಾರ್ಯ ಪೂರ್ಣಗೊಂಡ ಬಳಿಕ ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೊಂದಿದೆ.

ಆದರೆ ಇದೇ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯೂ ನಡೆಯುತ್ತಿರುವುದರಿಂದ ಬಹುತೇಕ ಉಪನ್ಯಾಸಕರನ್ನು ಚುನಾವಣಾ ಕಾರ್ಯಗಳಿಗೆ ನಿಯೋಜನೆ ಮಾಡಿದ್ದು, ದ್ವಿತೀಯ ಪಿಯು ಮೌಲ್ಯಮಾಪನ ವಿಳಂಬವಾಗಬಹುದು ಎಂದೂ ಸಹ ಹೇಳಲಾಗುತ್ತಿದೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಉಪನ್ಯಾಸಕರು ಮೌಲ್ಯಮಾಪನ ಕಾರ್ಯಕ್ಕೆ ಗೈರು ಹಾಜರಾದರೆ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular