ಬೆಂಗಳೂರು: ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಭವಾನಿ ರೇವಣ್ಣ ಅವರಿಗೆ ಅನಿತಾ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಈ ಹಿಂದಿನ ಹಲವು ಚುನಾವಣೆಗಳಲ್ಲಿ ಸ್ಪರ್ಧೆ ಮಾಡಿದ್ದೇನೆ. ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಆದೇಶವನ್ನು ಮಾತ್ರ ಪಾಲಿಸಿಕೊಂಡು ಬಂದಿದ್ದೇನೆ ಹೊರತೂ ದೇವೇಗೌಡರು ಕಟ್ಟಿದ ಪಕ್ಷ ಮತ್ತು ಅದರ ವರ್ಚಸ್ಸಿಗೆ ನಾನು ಎಂದು ಧಕ್ಕೆ ತರುವ ಕೆಲಸ ಮಾಡಿಲ್ಲ. ಮುಂದೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಭವಾನಿ ರೇವಣ್ಣ ಅವರಿಗೆ ಅನಿತಾ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಶಾಸಕಿ ಅನಿತಾ ಕುಮಾರಸ್ವಾಮಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಅನಿತಾ ಕುಮಾರಸ್ವಾಮಿ ಅವರು, ಪುತ್ರ ನಿಖಿಲ್ ಗೆ ರಾಮನಗರ ಕ್ಷೇತ್ರ ಬಿಟ್ಟು ಕೊಟ್ಟಿದ್ದೇನೆ. ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ಅನಿತಾ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ಶ್ರೀ ನಿಖಿಲ್ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್ ಕಮಲದ ಉಪ ಚುನಾವಣೆಯಲ್ಲಿ @JanataDal_S ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಪೂಜ್ಯ ಶ್ರೀ @H_D_Devegowda ಅವರು & ಶ್ರೀ @hd_kumaraswamy ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ. 2/7
— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) April 4, 2023
2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ @JanataDal_S ಪಕ್ಷ, ಪೂಜ್ಯ ಶ್ರೀ @H_D_Devegowda ಅವರು, ಶ್ರೀ @hd_kumaraswamy ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ. 4/7
— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) April 4, 2023
ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ. 6/7
— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) April 4, 2023
ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು ಎಂದು ಮನವಿ ಮಾಡುತ್ತೇನೆ.7/7
— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) April 4, 2023


