HomeEntertainmentಬಹಿರಂಗವಾಗಿ ಮುತ್ತಿಕ್ಕಿದ್ದ ಕೇಸ್ ನಲ್ಲಿ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್....!

ಬಹಿರಂಗವಾಗಿ ಮುತ್ತಿಕ್ಕಿದ್ದ ಕೇಸ್ ನಲ್ಲಿ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್….!

ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿ ಮುತ್ತಿಕ್ಕಿಸಿಕೊಂಡಿದ್ದ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿಲ್ಪಾ ಶೆಟ್ಟಿ, ನಿರ್ದೋಷಿ ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ್ದ ತೀರ್ಪನ್ನು ಸೆಷನ್ಸ್ ನ್ಯಾಯಾಲಯ ಎತ್ತಿ ಹಿಡಿದಿದೆ.

ಪ್ರಕರಣದ ವಿವರ: 2007ರಲ್ಲಿ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಆಗಮಿಸಿದ್ದ ಹಾಲಿವುಡ್ ನಟ ರಿಚರ್ಡ್ ಗೇರ್, ನಟಿ ಶಿಲ್ಪಾ ಶೆಟ್ಟಿಯವರನ್ನು ವೇದಿಕೆ ಮೇಲೆಯೇ ಬರಸೆಳೆದು ಬಹಿರಂಗವಾಗಿ ಮುತ್ತು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಶಿಲ್ಪಾ ಶೆಟ್ಟಿ ಸಾರ್ವಜನಿಕವಾಗಿ ಅಶ್ಲೀಲವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಾಗಿದ್ದು, ಶಿಲ್ಪಾ ಶೆಟ್ಟಿ ನಿರ್ದೋಷಿ ಎಂದು 2022ರಲ್ಲಿ ತೀರ್ಪು ಪ್ರಕಟವಾಗಿತ್ತು. ಇದನ್ನು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ಇದೀಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಲಾಗಿದೆ. ಹೀಗಾಗಿ ಶಿಲ್ಪಾ ಶೆಟ್ಟಿ ನಿರಾಳರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular