HomeKarnatakaBIG NEWS: ಕಾಂಗ್ರೆಸ್ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು

BIG NEWS: ಕಾಂಗ್ರೆಸ್ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ರಾಜ್ಯಕ್ಕೆ ಐಟಿ ಅಧಿಕಾರಿಗಳನ್ನು ಕೇಂದ್ರ ಬಿಜೆಪಿಯಿಂದ ಕಳುಹಿಸಲಾಗುತ್ತಿದೆ. ಐಟಿ, ಇಡಿಯಿಂದ ಕಾಂಗ್ರೆಸ್ ಟಾರ್ಗೆಟ್ ಮಾಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಚುನಾವಣಾ ಆಯೋಗವೇ ಐಟಿ ಅಧಿಕಾರಿಗಳನ್ನು ನೇಮಕ ಮಾಡಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಚುನಾವಣಾ ಆಯೋಗವೇ ಎಲ್ಲಾ ಜಿಲ್ಲೆಗಳಿಗೂ ಐಟಿ ಅಧಿಕಾರಿಗಳನ್ನು ನೇಮಕ ಮಾಡಿದೆ. ಕಾಂಗ್ರೆಸ್ ನವರು ಚುನಾವಣಾ ಭಯದಿಂದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬ್ಲ್ಯಾಕ್ ಮನಿ ಇಲ್ಲದಿದ್ದರೆ ಕಾಂಗ್ರೆಸ್ ನವರಿಗೆ ಭಯ ಯಾಕೆ? ಅನಗತ್ಯ ಗೊಂದಲ ಸೃಷ್ಟಿ ಮಾಡಲು ಕಾಂಗ್ರೆಸ್ ನವರು ಈ ರೀತಿ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular