
ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನ್ನು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ, ರಾಜಸ್ಥಾನ ಮೂಲದ ವ್ಯಕ್ತಿ ಬಳಿ 2 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ.
ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಇಷ್ಟೊಂದು ಪ್ರಮಾಣದ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ 2 ಕೋಟಿ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ರಾಜಸ್ಥಾನ ಮೂಲದ ಮಹೇಂದ್ರ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ.
ಅನಧಿಕೃತ ಹಣದ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ನಿಡಲಾಗಿದ್ದು, ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

