HomeIndiaBREAKING NEWS: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ; 'ಮೀಡಿಯಾ ಒನ್' ನ್ಯೂಸ್ ಚಾನೆಲ್ ಮೇಲಿನ ನಿಷೇಧ...

BREAKING NEWS: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ; ‘ಮೀಡಿಯಾ ಒನ್’ ನ್ಯೂಸ್ ಚಾನೆಲ್ ಮೇಲಿನ ನಿಷೇಧ ರದ್ದುಪಡಿಸಿದ ಸುಪ್ರೀಂ

ಮಹತ್ವದ ನಡೆಯೊಂದರಲ್ಲಿ ಸುಪ್ರೀಂ ಕೋರ್ಟ್, ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಮೇಲಿನ ನಿಷೇಧವನ್ನು ರದ್ದುಪಡಿಸಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರುಗಳಿದ್ದ ದ್ವಿಸದಸ್ಯ ಪೀಠ ಮಹತ್ವದ ಆದೇಶ ನೀಡಿದ್ದು, ರಾಷ್ಟ್ರೀಯ ಭದ್ರತಾ ವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂಬ ಕೇಂದ್ರ ಗೃಹ ಸಚಿವಾಲಯದ ವಾದವನ್ನು ತಳ್ಳಿ ಹಾಕಲಾಗಿದೆ.

ಅಲ್ಲದೆ ಮೀಡಿಯಾ ಒನ್ ನ್ಯೂಸ್ ಚಾನೆಲ್ ಮೇಲೆ ನಿಷೇಧ ಹೇರಿರುವ ಕುರಿತಂತೆ ಮುಚ್ಚಿದ ಲಕೋಟೆಯಲ್ಲಿ ಕಾರಣ ತಿಳಿಸುವುದಾಗಿ ಕೇಂದ್ರ ಸರ್ಕಾರ ನೀಡಿದ ಹೇಳಿಕೆಯನ್ನು ಸಹ ನ್ಯಾಯಾಲಯ ತಳ್ಳಿ ಹಾಕಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular