HomeKarnatakaBIG NEWS: ಬಿಜೆಪಿ ಸೇರ್ಪಡೆಯಾಗ್ತಾರಾ ನಟ ಕಿಚ್ಚ ಸುದೀಪ್....? ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ

BIG NEWS: ಬಿಜೆಪಿ ಸೇರ್ಪಡೆಯಾಗ್ತಾರಾ ನಟ ಕಿಚ್ಚ ಸುದೀಪ್….? ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಭಾಗವಹಿಸುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಸುದ್ದಿ ಬೆನ್ನಲ್ಲೇ ರಾಜ್ಯ ರಾಜಕೀಯ ನಾಯಕರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟ ಕಿಚ್ಚನ ಮೂಲಕ ಬಿಜೆಪಿ ಯುವ ಸಮುದಾಯವನ್ನು ಬಿಜೆಪಿಗೆ ಸೆಳೆಯುವ ಯತ್ನ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಆದರೆ ಬಿಜೆಪಿ ಮೂಲಗಳ ಮಾಹಿತಿ ಪ್ರಕಾರ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗುತ್ತಿಲ್ಲ, ಬಿಜೆಪಿ ಸ್ಟಾರ್ ಪ್ರಚಾರಕರಾಗಿ ಮಾತ್ರ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಟ್ಟಾರೆ ಇಂದು ಮಧ್ಯಾಹ್ನ 2:30ಕ್ಕೆ ಸಿಎಂ ಬೊಮ್ಮಾಯಿ ನಡೆಸಲಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದ್ದು, ನಟ ಸುದೀಪ್ ಕೂಡ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಳ್ಳಲ್ಲಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸುದೀಪ್ ತಮ್ಮ ರಾಜಕೀಯ ಎಂಟ್ರಿ ಬಗ್ಗೆಯೂ ಮಾತನಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಲಿದೆಯೇ ಸಿಎಂ ಸುದ್ದಿಗೋಷ್ಠಿ ಎಂಬುದನ್ನು ಕಾದುನೊಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular