HomeKarnatakaBIG NEWS: BJP ಸೋಲುವ ಭೀತಿಯಲ್ಲಿ ಈ ರೀತಿ ಸುದ್ದಿ ಹರಡಿಸುತ್ತಿದ್ದಾರೆ ಎಂದ ಪ್ರಕಾಶ್ ರೈ

BIG NEWS: BJP ಸೋಲುವ ಭೀತಿಯಲ್ಲಿ ಈ ರೀತಿ ಸುದ್ದಿ ಹರಡಿಸುತ್ತಿದ್ದಾರೆ ಎಂದ ಪ್ರಕಾಶ್ ರೈ

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಬಹುಭಾಷಾ ನಟ, ನಿರ್ದೇಶಕ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸೋಲುವ ಭಯದಲ್ಲಿ ಈ ರೀತಿ ಸುದ್ದಿ ಹರಡಿಸುತ್ತಿದೆ. ಭ್ರಷ್ಟ ಬಿಜೆಪಿ ಹರಡಿಸುತ್ತಿರುವ ಸುದ್ದಿ ಸುಳ್ಳು ಎಂದು ನಾನು ನಂಬುತ್ತೇನೆ ನಮ್ಮ ಕಿಚ್ಚ ತಮ್ಮನ್ನು ತಾವು ಮಾರಿಕೊಳ್ಳುವವರಲ್ಲ ಎಂದು ಹೇಳಿದ್ದಾರೆ.

ಒಟ್ಟಾರೆ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಮಧ್ಯಾಹ್ನ ಸಿಎಂ ಬಸವರಾಜ್ ಬೊಮ್ಮಾಯಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಎಲ್ಲದಕ್ಕೂ ಉತ್ತರ ಸಿಗುವ ನಿರೀಕ್ಷೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular