ಕೇರಳದಲ್ಲಿ ರೈಲು ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನ ಮಹಾರಾಷ್ಟ್ರದ ರತ್ನಗಿರಿ ರೈಲು ನಿಲ್ದಾಣದಿಂದ ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ( ಎಟಿಎಸ್ ) ಬಂಧಿಸಿದೆ.
ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಆರೋಪಿ ಶಾರುಖ್ ಸೈಫಿಯನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.
ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ ಪ್ರೆಸ್ ರೈಲು ಭಾನುವಾರ ರಾತ್ರಿ 9:45 ರ ಸುಮಾರಿಗೆ ಕೊಝಿಕ್ಕೋಡ್ ನಗರವನ್ನು ದಾಟಿ ಕೊರಪುಳ ರೈಲ್ವೆ ಸೇತುವೆಯನ್ನು ತಲುಪಿದಾಗ ಆರೋಪಿ ಪೆಟ್ರೋಲ್ ಸುರಿದು ಸಹ-ಪ್ರಯಾಣಿಕರಿಗೆ ಬೆಂಕಿ ಹಚ್ಚಿದ್ದ.
ಇದರಿಂದ ಓರ್ವ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ರೆ, 8 ಪ್ರಯಾಣಿಕರು ಗಾಯಗೊಂಡಿದ್ದರು.
ಶಂಕಿತ ಆರೋಪಿ ಸೈಫಿ ಮಂಗಳವಾರ ರತ್ನಗಿರಿಯಲ್ಲಿ ಇದ್ದುದನ್ನು ಪತ್ತೆಹಚ್ಚಲಾಗಿತ್ತು. ಆತ ಕೇರಳದಲ್ಲಿ ರೈಲಿನಿಂದ ಬಿದ್ದು ತಲೆಗೆ ಗಾಯಗೊಂಡು ಚಿಕಿತ್ಸೆಗಾಗಿ ರತ್ನಗಿರಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ಗೊತ್ತಾಗಿತ್ತು. ಆದರೆ ಆರೋಪಿ ಚಿಕಿತ್ಸೆ ಪೂರ್ಣಗೊಳ್ಳುವ ಮುನ್ನವೇ ಆಸ್ಪತ್ರೆಯಿಂದ ಪರಾರಿಯಾಗಿದ್ದ. ತರುವಾಯ ರತ್ನಗಿರಿ ಪ್ರದೇಶದಲ್ಲಿ ವ್ಯಾಪಕ ಶೋಧ ನಡೆಸಿ ಆರೋಪಿ ಶಾರುಖ್ ಸೈಫಿಯನ್ನು ಪತ್ತೆಹಚ್ಚಿ ಬಂಧಿಸಲಾಯಿತು.