
ಗುರಪ್ಪನಾಯ್ದು ಅವರ ಬೆಂಗಳೂರಿನ ಬನಶಂಕರಿ 2ನೇ ಹಂತದಲ್ಲಿರುವ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಗುರಪ್ಪ ನಾಯ್ಡು ಪದ್ಮನಾಭನಗರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ಐಟಿ ದಾಳಿ ನಡೆದಿದ್ದು, ಕೈ ಮುಖಂಡರಿಗೆ ಬಿಗ್ ಶಾಕ್ ಎದುರಾಗಿದೆ.

