HomeKarnatakaBIG NEWS: ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ನಾಳೆಯಿಂದ ಸಾರ್ವಜನಿಕ ಪ್ರವೇಶ ಬಂದ್

BIG NEWS: ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ನಾಳೆಯಿಂದ ಸಾರ್ವಜನಿಕ ಪ್ರವೇಶ ಬಂದ್

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಏ.9ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಏ.9ರಂದು ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಏ.6ರಿಂದ 9ರವರೆಗೆ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿಲ್ಲ.

ಅಲ್ಲದೇ ಬಂಡೀಪುರದ ಸುತ್ತಮುತ್ತಲಿರುವ ಎಲ್ಲಾ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular