ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಶಾಂತ್ ಸಂಬರಗಿ ವಿಚಾರಣೆ ನಡೆಸಿದ್ದಾರೆ.
ಈ ಕುರಿತಾಗಿ ಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಶಾಂತ್ ಸಂಬರಗಿ ವಿಚಾರಣೆ ನಡೆಸಿದ್ದಾರೆ. ಪ್ರಶಾಂತ್ ಸಂಬರಗಿ ಅವರಿಂದ ಮುಚ್ಚಳಿಕೆ ಬರಹ ಜೊತೆಗೆ ಒಂದು ಲಕ್ಷ ರೂಪಾಯಿ ಬಾಂಡ್ ಬರೆಸಿಕೊಂಡು ಪೊಲೀಸರು ಕಳುಹಿಸಿದ್ದಾರೆ.