ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು, ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಮೇ 13 ರಂದು ಫಲಿತಾಂಶ ಹೊರ ಬೀಳಲಿದ್ದು, ಸುಸೂತ್ರವಾಗಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ನಡೆಸಿದೆ.
ಸರ್ಕಾರಿ ನೌಕರರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಬಾರದು ಎಂಬ ನಿಯಮವಿದ್ದು, ಆದರೆ ಇದನ್ನು ಉಲ್ಲಂಘಿಸಿ ಜಾತ್ಯಾತೀತ ಜನತಾದಳ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವಸತಿ ನಿಲಯದ ವಾರ್ಡನ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.
ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದ ವಾರ್ಡನ್ ಯಶೋದಮ್ಮ ಅಮಾನತುಗೊಂಡವರಾಗಿದ್ದು, ಇವರು ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.