ಕೃಷಿ ಭೂಮಿಯನ್ನು ಖರೀದಿಸಿ ಅದನ್ನು ರಿಯಲ್ ಎಸ್ಟೇಟ್ ಸೇರಿದಂತೆ ಇತರೆ ಕೃಷಿಯೇತರ ಚಟುವಟಿಕೆಗಳಿಗೆ ಬಳಸುವುದನ್ನು ಗೋವಾ ಸರ್ಕಾರ ನಿರ್ಬಧಿಸಿದೆ. ಈ ಕುರಿತಂತೆ ನೂತನ ಮಸೂದೆಯನ್ನು ಅಂಗೀಕರಿಸಲಾಗಿದೆ.
ಭತ್ತದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಸಲುವಾಗಿ ನೂತನ ಮಸೂದೆಯನ್ನು ಅಂಗೀಕರಿಸಲಾಗಿದ್ದು, ಇದರ ಪ್ರಕಾರ ಕೃಷಿಯೇತರ ಚಟುವಟಿಕೆಗಳಿಗೆ ಕೃಷಿ ಭೂಮಿಯನ್ನು ಮಾರಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ.
ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿಸಬಹುದಾಗಿದ್ದರೂ ಸಹ ಆ ಭೂಮಿಯಲ್ಲಿ ಮೂರು ವರ್ಷಗಳವರೆಗೆ ಯಾವುದೇ ಕೃಷಿ ಕಾರ್ಯ ನಡೆಯದೆ ಹೋದರೆ ಅದನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತದೆ ಎಂದು ಹೇಳಲಾಗಿದೆ.