HomeKarnatakaBIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್; ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್; ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಪ್ರತಿ ಕ್ಷೇತ್ರಕ್ಕೆ ತಲಾ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಿದೆ. ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಭಾವ್ಯ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ.

ಏಪ್ರಿಲ್ 8ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದ್ದು, ಅಲ್ಲಿ ಚರ್ಚೆ ನಡೆದ ಬಳಿಕ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ಏಪ್ರಿಲ್ 9ರ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular