ಗುರುವಾರದಂದು ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕಡೂರು ಕ್ಷೇತ್ರದ ಟಿಕೆಟ್ ಸಹ ಘೋಷಣೆಯಾಗಿದೆ. ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ.ಎಸ್.ವಿ. ದತ್ತ ಅವರಿಗೆ ತೀವ್ರ ನಿರಾಸೆಯಾಗಿದ್ದು ಕೆ.ಎಸ್. ಆನಂದ್ ಅವರಿಗೆ ಟಿಕೆಟ್ ಸಿಕ್ಕಿದೆ.
ಜೆಡಿಎಸ್ ತೊರೆದು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ವೈ.ಎಸ್.ವಿ. ದತ್ತ, ಕಡೂರು ಕ್ಷೇತ್ರದ ಟಿಕೆಟ್ ತಮಗೇ ಸಿಗುತ್ತದೆ ಎಂಬ ವಿಶ್ವಾಸ ಹೊಂದಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಶ್ರೀರಕ್ಷೆಯೂ ದತ್ತ ಅವರಿಗಿದ್ದ ಕಾರಣ ಟಿಕೆಟ್ ಸಿಗಬಹುದು ಎಂದು ಭಾವಿಸಲಾಗಿತ್ತು.
ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಆನಂದ್ ಅವರಿಗೆ ಟಿಕೆಟ್ ಸಿಕ್ಕಿದ್ದು, ಹೀಗಾಗಿ ವೈ.ಎಸ್.ವಿ. ದತ್ತ ಅವರ ಅಭಿಮಾನಿಗಳು ಪಕ್ಷೇತರವಾಗಿಯಾದರೂ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಎಲ್ಲಾ ಸಾಧಕ ಬಾಧಕಗಳನ್ನು ಯೋಚಿಸಿ ಇನ್ನೆರಡು ದಿನಗಳಲ್ಲಿ ಮತ್ತೊಮ್ಮೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ದತ್ತ ಹೇಳಿದ್ದಾರೆ.