HomeKarnatakaಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರು ಸಸ್ಪೆಂಡ್

ಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರು ಸಸ್ಪೆಂಡ್

ಬೀದರ್: ಜವಾಬ್ದಾರಿ ಅರಿಯದೇ ಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಪರೀಕ್ಷೆ ನಿಯಮಗಳನ್ನು ಪಾಲಿಸದೇ ಎಸ್ಎಸ್ಎಲ್ಸಿ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಲಾಗಿದೆ. ತಮ್ಮ ಜವಾಬ್ದಾರಿಯನ್ನು ತಿಳಿಯದೇ ಖುದ್ದಾಗಿ ಮಕ್ಕಳಿಗೆ ಪ್ರಶ್ನೆ ಪತ್ರಿಕೆಗೆ ಉತ್ತರ ಸಿದ್ದಪಡಿಸಿ ನೀಡಿದ ಆರೋಪದ ಹಿನ್ನೆಲೆಯಲ್ಲಿ 16 ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷೆ ಕಾರ್ಯ ನಿರ್ವಹಿಸಿದ ಎಲ್ಲಾ ಶಿಕ್ಷಕರ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಣ ಸಂಸ್ಥೆಗಳು ಸೂಚಿಸಿದ ಶಿಕ್ಷಕರು ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಶಿಕ್ಷಣ ಕಾಯಿದೆ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಡಿಪಿಐ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular