HomeKarnatakaBIG NEWS: ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್...!

BIG NEWS: ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್…!

ಇತ್ತೀಚೆಗಷ್ಟೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವುದು ನಿಶ್ಚಿತವಾಗಿದೆ. ಜೆಡಿಎಸ್ ನಿಂದ ಬಹು ಹಿಂದೆಯೇ ಒಂದು ಕಾಲು ಹೊರಗಿಟ್ಟಿದ್ದ ಅವರು ಅಂತಿಮವಾಗಿ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತಾದರೂ ಇದೀಗ ಏಪ್ರಿಲ್ 9ರಂದು ಸ್ವ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 9ರ ಸಂಜೆ 4 ಗಂಟೆಗೆ ಅರಸೀಕೆರೆ ಜೇನುಕಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲಾದವರು ಪಾಲ್ಗೊಳ್ಳಲಿದ್ದು, 30 ರಿಂದ 40 ಸಾವಿರ ಮಂದಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular