HomeBusinessವಿದ್ಯುತ್ ದರ ಏರಿಕೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ನೀತಿ ಸಂಹಿತೆ ಪರಿಣಾಮ ದರ ಪರಿಷ್ಕರಣೆ ಮುಂದೂಡಿಕೆ

ವಿದ್ಯುತ್ ದರ ಏರಿಕೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ನೀತಿ ಸಂಹಿತೆ ಪರಿಣಾಮ ದರ ಪರಿಷ್ಕರಣೆ ಮುಂದೂಡಿಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಮಂಡಳಿ ವಿದ್ಯುತ್ ದರ ಪರಿಷ್ಕರಣೆ ಅನ್ವಯ ಹೊಸ ದರಗಳ ಪ್ರಕಟಣೆಯನ್ನು ಮುಂದೂಡಿದೆ.

ಮಂಡಳಿಯ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆಯಲ್ಲಿ ಫೆಬ್ರವರಿ 13 ರಿಂದ ಮಾರ್ಚ್ 1 ರವರೆಗೆ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಕಲಬುರ್ಗಿ, ಹುಕ್ಕೇರಿಯಲ್ಲಿ ಸಾರ್ವಜನಿಕ ಅದಾಲತ್ ನಡೆಸಲಾಗಿತ್ತು. ವಿದ್ಯುತ್ ದರ ಪರಿಷ್ಕರಣೆಗೆ ಅಂತಿಮ ಸಿದ್ಧತೆ ಕೈಗೊಂಡ ಸಂದರ್ಭದಲ್ಲಿಯೇ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ ಹೊಸ ದರ ಪ್ರಕಟಣೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಎಸ್ಕಾಂಗಳು ಪ್ರತಿ ಯೂನಿಟ್ ಗೆ 1.50 ರೂ. ನಿಂದ 2 ರೂ.ವರೆಗೆ ವಿದ್ಯುತ್ ದರ ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿವೆ. ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಮಂಡಳಿ ಎಸ್ಕಾಂಗಳ ಬೇಡಿಕೆ ಮತ್ತು ಸಾರ್ವಜನಿಕರ ಅಭಿಪ್ರಾಯದ ನಂತರ ವಿದ್ಯುತ್ ದರ ಪರಿಷ್ಕರಣೆ ಮಾಡಿ ಹೊಸ ದರಗಳ ಪ್ರಕಟಣೆಗೆ ಮುಂದಾಗಿತ್ತು. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅದನ್ನು ಮುಂದೂಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular