HomeEntertainmentಕಿಚ್ಚ ಸುದೀಪ್ ಬಳಿಕ ಮತ್ತೊಬ್ಬ ಸ್ಟಾರ್ ನಟ ಬಿಜೆಪಿ ಪರ ಪ್ರಚಾರ

ಕಿಚ್ಚ ಸುದೀಪ್ ಬಳಿಕ ಮತ್ತೊಬ್ಬ ಸ್ಟಾರ್ ನಟ ಬಿಜೆಪಿ ಪರ ಪ್ರಚಾರ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಟ ಕಿಚ್ಚ ಸುದೀಪ್ ಬಳಿಕ ಮತ್ತೊಬ್ಬ ಸ್ಟಾರ್ ನಟ ಬಿಜೆಪಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಬುಧವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಪವನ್ ಕಲ್ಯಾಣ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸುವಂತೆ ಪವನ್ ಕಲ್ಯಾಣ್ ಗೆ ಮನವಿ ಮಾಡಲಾಗಿದೆ. ತೆಲುಗು ಪ್ರಾಬಲ್ಯದ ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು ಮೊದಲಾದ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನಸೇನಾ ಸಂಸ್ಥಾಪಕ ಅಧ್ಯಕ್ಷರಾಗಿರುವ ಪವನ್ ಕಲ್ಯಾಣ್ ಅವರಿಗೆ ರಾಜ್ಯದಲ್ಲಿ ಬಹುದೊಡ್ಡ ಅಭಿಮಾನಿ ಬಳಗ ಇದೆ. ಅವರು ಪ್ರಚಾರ ನಡೆಸುವುದರಿಂದ ಬಿಜೆಪಿಗೆ ಅನುಕೂಲವಾಗುವ ನೀರಿಕ್ಷೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular