ಬೀದರ್: ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿದ್ದು, ಸಾಮೂಹಿಕ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ 9 ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಾಲ್ಕಿಯಲ್ಲಿ ನಡೆದಿದೆ.
ಭಾಲ್ಕಿ ತಾಲೂಕಿನ ಶಿವಾಜಿ ಶಾಲೆಯಲ್ಲಿ ಇಂಗ್ಲೀಷ್ ವಿಷಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ನಡೆಸಿದ್ದು, ಕರ್ತವ್ಯ ಲೋಪ ಆರೋಪದಲ್ಲಿ 9 ಶಿಕ್ಷಕರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ನಿನ್ನೆ ನಡೆದಿದ್ದ ಇಂಗ್ಲೀಷ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿದ್ದಾರೆ. ಶಿಕ್ಷಕರೇ ಪ್ರೋತ್ಸಾಹ ನೀಡುತ್ತಿರುವುದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದ ವೇಳೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಹ ಶಿಕ್ಷಕ ಶೇಷಪ್ಪ, ಸಂಪತ್, ಗೋವಿಂದ, ಕುಪೇಂದ್ರ, ಶಿವಾಜಿ, ಶಿವಕುಮಾರ್ ಬಿರಾದಾರ ಹಾಗೂ ಭೀಮ್ ರಾವ್ ಎಂಬ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.