HomeKarnatakaBIG NEWS: ದಿ.ಆರ್.ಧ್ರುವನಾರಾಯಣ ಪತ್ನಿ ವಿಧಿವಶ

BIG NEWS: ದಿ.ಆರ್.ಧ್ರುವನಾರಾಯಣ ಪತ್ನಿ ವಿಧಿವಶ

ಮೈಸೂರು: ಕಾಂಗ್ರೆಸ್ ನಾಯಕ ದಿ.ಆರ್.ಧ್ರುವನಾರಾಯಣ ಅವರ ಪತ್ನಿ ವೀಣಾ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವೀಣಾ ಅವರು ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು.

ವೀಣಾ ಧ್ರುವನಾರಾಯಣ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರ ತಾಯಿ. ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular