HomeIndiaBIG NEWS: ಕೊರೊನಾ ಸೋಂಕು ಇನ್ನಷ್ಟು ಹೆಚ್ಚಳ; ಒಂದೇ ದಿನದಲ್ಲಿ 6000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ...

BIG NEWS: ಕೊರೊನಾ ಸೋಂಕು ಇನ್ನಷ್ಟು ಹೆಚ್ಚಳ; ಒಂದೇ ದಿನದಲ್ಲಿ 6000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 14 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಒಂದೇ ದಿನದಲ್ಲಿ 6000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 6050 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಒಂದೇ ದಿನದಲ್ಲಿ 14 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,943 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 28,303 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,85,858 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 02,334 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,20,700 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,78,533 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular