HomeKarnatakaBIG NEWS: ಕಾಂಗ್ರೆಸ್ ಟಿಕೆಟ್ ನಿರಾಕರಣೆ; ಬೆಂಬಲಿಗರ ಸಭೆ ಕರೆದ YSV ದತ್ತ

BIG NEWS: ಕಾಂಗ್ರೆಸ್ ಟಿಕೆಟ್ ನಿರಾಕರಣೆ; ಬೆಂಬಲಿಗರ ಸಭೆ ಕರೆದ YSV ದತ್ತ

ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ವೈ.ಎಸ್‌.ವಿ. ದತ್ತ, ಕಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು ಆದರೆ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಈ ಕ್ಷೇತ್ರದಲ್ಲಿ ಆನಂದ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ವೈ.ಎಸ್.ವಿ. ದತ್ತ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.

ಈ ಹಿನ್ನಲೆಯಲ್ಲಿ ಅಭಿಮಾನಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಪಕ್ಷೇತರ ಅಭ್ಯರ್ಥಿಯಾಗಿಯಾದರೂ ಕಣಕ್ಕಿಳಿಯುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಮಾತನಾಡಿದ ವೈ.ಎಸ್.ವಿ. ದತ್ತ, ತಮಗೆ ಕಾಂಗ್ರೆಸ್ ಟಿಕೆಟ್ ನೀಡದಿದ್ದರೂ ಪರವಾಗಿಲ್ಲ. ಆದರೆ ಕಡೆ ಪಕ್ಷ ಸೌಜನ್ಯಕ್ಕಾದರೂ ತಮ್ಮೊಂದಿಗೆ ಮಾತನಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ಬಹಿರಂಗ ಪತ್ರ ಬರೆದಿರುವ ವೈ.ಎಸ್.ವಿ. ದತ್ತ, ಕಾಂಗ್ರೆಸ್ ನಡೆಯಿಂದ ತಮಗೆ ಹಾಗೂ ತಮ್ಮ ಬೆಂಬಲಿಗರಿಗೆ ಅಪಮಾನವಾಗಿದೆ. ಹಣ ಇಲ್ಲದ ತಮ್ಮನ್ನು ಕ್ಷೇತ್ರದ ಜನತೆ ದತ್ತಣ್ಣ ಎಂದು ಪ್ರೀತಿಯಿಂದ ಬೆಳೆಸಿದ್ದಾರೆ. ಹೀಗಾಗಿ ಭಾನುವಾರದಂದು ಕ್ಷೇತ್ರದ ಜನತೆಯ ಸಭೆ ನಡೆಸಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದು ಈಗ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular