HomeKarnatakaBIG NEWS: ಕೈ ಪಾಳಯಕ್ಕೆ ಬಿಗ್ ಶಾಕ್; 5 ವಾರ್ಡ್ ಗಳ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ...

BIG NEWS: ಕೈ ಪಾಳಯಕ್ಕೆ ಬಿಗ್ ಶಾಕ್; 5 ವಾರ್ಡ್ ಗಳ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಬಿಜೆಪಿ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ಕೈ ಪಾಳಯಕ್ಕೆ ಬಿಗ್ ಶಾಕ್ ಎದುರಾಗಿದೆ. ನೂರಕ್ಕೂ ಹೆಚ್ಚು ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ 5 ವಾರ್ಡ್ ಗಳ ಕಾಂಗ್ರೆಸ್ ಸದಸ್ಯರು ಇಂದು ಸಚಿವ ಡಾ.ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಸಾಮೂಹಿಕವಾಗಿ ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಬಾವುಟ ನೀಡಿ ಕೈ ಸದಸ್ಯರನ್ನು ಸಚಿವರು ಕೇಸರಿ ಪಡೆಗೆ ಬರಮಾಡಿಕೊಂಡರು.

ಸುಮಾರು 150 ಕಾಂಗ್ರೆಸ್ ಸದಸ್ಯರು ಏಕಕಾಲದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular