HomeCrimeBIG NEWS: ವಿಚಿತ್ರ ಘಟನೆ; ಪತಿ ಚಾಕೋಲೇಟ್ ತಂದು ಕೊಟ್ಟಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎರಡು...

BIG NEWS: ವಿಚಿತ್ರ ಘಟನೆ; ಪತಿ ಚಾಕೋಲೇಟ್ ತಂದು ಕೊಟ್ಟಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎರಡು ಮಕ್ಕಳ ತಾಯಿ

ಬೆಂಗಳೂರು: ಪತಿ ಚಾಕೋಲೇಟ್ ತಂದುಕೊಟ್ಟಿಲ್ಲ ಎಂಬ ಕಾರಣಕ್ಕೆ ಮನನೊಂದ ಪತ್ನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.

ನಂದಿನಿ (30) ಮೃತ ಮಹಿಳೆ. 6 ವರ್ಷದ ಹಿಂದೆ ವಿವಾಹವಾಗಿದ್ದ ನಂದಿನಿಗೆ ಇಬ್ಬರು ಮಕ್ಕಳಿದ್ದಾರೆ. ಪತಿ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ನಂದಿನಿ ಪತಿಗೆ ಚಾಕೋಲೇಟ್ ತಂದುಕೊಡುವಂತೆ ಹೇಳಿದ್ದರಂತೆ. ಆದರೆ ಮಧ್ಯಾಹ್ನವಾದರೂ ಪತಿ ಚಾಕೋಲೇಟ್ ತಂದುಕೊಟ್ಟಿಲ್ಲ. ಫೋನ್ ಮಾಡಿದರೂ ರಿಸೀವ್ ಮಾಡಿಲ್ಲ. ಇದರಿಂದ ಬೇಸರಗೊಂಡ ನಂದಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಮನೆಗೆ ಬಂದು ನೋಡಿದಾಗ ಪತ್ನಿ ನೇಣಿಗೆ ಕೊರಳೊಡ್ಡಿರುವುದು ನೋಡಿ ಶಾಕ್ ಆಗಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಅಷ್ಟರಲ್ಲೇ ನಂದಿನಿ ಸಾವನ್ನಪ್ಪಿದ್ದರು. ಚಾಕೋಲೇಟ್ ತಂದುಕೊಟ್ಟಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ ಆದರೂ ಘಟನೆ ಅನುಮಾನಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular