
ತುಮಕೂರು ನಗರ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಳಿಯ ಎಸ್.ರಫೀಕ್ ಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ ರಾಜಿನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಷಫಿ ಅಹ್ಮದ್, ಅಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದು ಕಿಡಿಕಾರಿದ್ದಾರೆ. ಇಕ್ಬಾಲ್ ಅಹ್ಮದ್ ಗೆ ಟಿಕೆಟ್ ನೀಡಿರುವ ಹೈಕಮಾಂಡ್ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಷಫಿ ಅಹ್ಮದ್ ಎರಡು ಬಾರಿ ಹಾಗೂ ಅವರ ಅಳಿಯ ರಫೀಕ್ ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ಯುವ ಮುಖಂಡ ಇಕ್ಬಾಲ್ ಅಹ್ಮದ್ ಗೆ ಟಿಕೆಟ್ ಘೋಷಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

