ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತಿದ್ದ ರೌಡಿ ಶೀಟರ್ ಸೈಲೆಂಟ್ ಸುನೀಲ್ ಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಯಾವುದೇ ಅಪರಾಧ ಪ್ರಕರಣ, ಚುಟುವಟಿಕೆಗಳಲ್ಲಿ ಭಾಗಿಯಾಗುವಂತಿಲ್ಲ ಎಂದು ಖಡಕ್ ಆಗಿ ಸೂಚಿಸಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣೆಗೆ ಕರೆಸಿರುವ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್, 15 ಲಕ್ಷ ಬಾಂಡ್ ಬರೆಸಿಕೊಂಡು ಸಿ ಆರ್ ಪಿ ಸಿ 110 ಅಡಿಯಲ್ಲಿ ಬಾಂಡ್ ಬರೆಸಿಕೊಂಡು ಎಚ್ಚರಿಸಿದ್ದಾರೆ.
ಚುನಾವಣೆ ವೇಳೆ ಕಾನೂನು ಮೀರಿ ಕೆಲಸ ಮಾಡಬಾರದು. ರಾಜಕೀಯ ವಿಚಾರಕ್ಕೆ ಅಕ್ರಮವಾಗಿ ಎಂಟ್ರಿಯಾಗುವಂತಿಲ್ಲ. ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವಂತಿಲ್ಲ ಎಂದು ತಿಳಿಸಿದ್ದಾರೆ.