HomeKarnatakaಬಿಜೆಪಿಗೆ ಸುದೀಪ್ ಬೆಂಬಲ ಘೋಷಣೆ; ಪ್ರತಿಪಕ್ಷಗಳಿಗೆ ನಡುಕ ಶುರುವಾಗಿದೆ ಎಂದ ಸಿಎಂ

ಬಿಜೆಪಿಗೆ ಸುದೀಪ್ ಬೆಂಬಲ ಘೋಷಣೆ; ಪ್ರತಿಪಕ್ಷಗಳಿಗೆ ನಡುಕ ಶುರುವಾಗಿದೆ ಎಂದ ಸಿಎಂ

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದ ಖ್ಯಾತ ನಟ ಕಿಚ್ಚ ಸುದೀಪ್, ಬೊಮ್ಮಾಯಿ ಅವರು ಹೇಳಿದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುವುದಾಗಿ ಹೇಳಿದ್ದರು. ಆ ಸಂದರ್ಭದಲ್ಲಿ ಸುದೀಪ್ ನನಗೆ ಬೆಂಬಲ ನೀಡಿದರೆ ಬಿಜೆಪಿಗೆ ಬೆಂಬಲ ನೀಡಿದಂತೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದರು.

ಬಿಜೆಪಿ ಅಭ್ಯರ್ಥಿಗಳ ಪರ ಕಿಚ್ಚ ಸುದೀಪ್ ಪ್ರಚಾರಕ್ಕೆ ಮುಹೂರ್ತವೂ ನಿಗದಿಯಾಗಿದ್ದು, ಏಪ್ರಿಲ್ 14 ರಿಂದ ಪ್ರಚಾರಕ್ಕೆ ಹೋಗಲಿದ್ದಾರೆ. ಇದರ ಮಧ್ಯೆ ನವ ದೆಹಲಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುದೀಪ್ ಬಿಜೆಪಿಗೆ ಬೆಂಬಲ ಘೋಷಿಸಿರುವುದರಿಂದ ಪ್ರತಿಪಕ್ಷಗಳ ನಾಯಕರಿಗೆ ನಡುಕ ಶುರುವಾಗಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬಿಜೆಪಿ ಟಿಕೆಟ್ ಹಂಚಿಕೆ ಕುರಿತಂತೆ ಮಾತನಾಡಿದ ಅವರು, ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಜೊತೆ ಸಭೆ ನಡೆಯಲಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚೆ ನಡೆಸಲಿದ್ದೇವೆ. ಆ ಬಳಿಕ ಅಂತಿಮಗೊಳಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular