HomeKarnatakaBIG NEWS: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ; ಬಂಡಾಯವೆದ್ದ ಯೋಗೇಶ್ ಬಾಬು ಪಕ್ಷೇತರರಾಗಿ ಸ್ಪರ್ಧೆಗೆ ಚಿಂತನೆ

BIG NEWS: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ; ಬಂಡಾಯವೆದ್ದ ಯೋಗೇಶ್ ಬಾಬು ಪಕ್ಷೇತರರಾಗಿ ಸ್ಪರ್ಧೆಗೆ ಚಿಂತನೆ

ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಹಲವರು ಕೈ ಪಾಳಯದ ವಿರುದ್ಧ ಸಿಡಿದೆದ್ದಿದ್ದು, ಪಕ್ಷ ತೊರೆಯುತ್ತಿದ್ದಾರೆ. ಈ ನಡುವೆ ಮೊಳಕಾಲ್ಮೂರು ಕಾಂಗ್ರೆಸ್ ನಲ್ಲಿ ಅಸಮಾಧನ ಸ್ಫೋಟಗೊಂಡಿದ್ದು, ಡಾ.ಬಿ.ಯೋಗೇಶ್ ಬಾಬು ಬಂಡಾಯವೆದ್ದಿದ್ದಾರೆ.

ಯೋಗೇಶ್ ಬಾಬು ನಿಷ್ಠೆಯಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದರೂ ಅವರನ್ನು ಕಡೆಗಣಿಸಿ ಬಿಜೆಪಿಯಿಂದ ಇತ್ತೀಚೆಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಎನ್.ವೈ.ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಲಾಗಿದೆ.

ಇದರಿಂದ ಬೇಸರಗೊಂಡಿರುವ ಯೋಗೇಶ್ ಬಾಬು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಬೆಂಬಲಿಗರ ಆಶಯದಂತೆ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular