HomeKarnatakaBIG NEWS: ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲು ಸಜ್ಜು; ಡಿ.ಕೆ.ಶಿವಕುಮಾರ್ ಮಾಹಿತಿ

BIG NEWS: ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲು ಸಜ್ಜು; ಡಿ.ಕೆ.ಶಿವಕುಮಾರ್ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ನಾಯಕರಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳು ಬಿಜೆಪಿ, ಜೆಡಿಎಸ್ ನತ್ತ ಮುಖ ಮಾಡಿದ್ದರೆ, ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ನಾಯಕರನ್ನು ತನ್ನ ಪಕ್ಷಕ್ಕೆ ಆಹ್ವಾನಿಸಿ, ಟಿಕೆಟ್ ಹಂಚಿಕೆ ಮಾಡುತ್ತಿದೆ.

ದೊಡ್ಡಬಳ್ಳಾಪುರದ ಕೆಲ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಜಾಲಪ್ಪ ಪುತ್ರ ನರಸಿಂಹಸ್ವಾಮಿ ಮತ್ತೆ ಪಕ್ಷಕ್ಕೆ ವಾಪಸ್ ಆಗಿದ್ದಾರೆ. ಬಿಜೆಪಿಗೆ ಹೋಗಬೇಡಿ ಎಂದು ಅವರಿಗೆ ಹಿಂದೆ ಹೇಳಿದ್ದೆ. ಈಗ ಕಾಂಗ್ರೆಸ್ ನಲ್ಲಿಯೇ ಇರುತ್ತೇನೆ ಎಂದು ಮತ್ತೆ ವಾಪಸ್ ಬರುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಈಬಾರಿಯೂ ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular