HomeKarnatakaBIG NEWS: ಖಾಸಗಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

BIG NEWS: ಖಾಸಗಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಬಂಡೆಗೇಟ್ ಬಳಿ ನಡೆದಿದೆ.

ಬಸ್ ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯೂರಿನಿಂದ ಚಿಕ್ಕನಾಯಕನಹಳ್ಳಿಗೆ ತೆರಳುತ್ತಿದ್ದ ಖಾಸಗಿ ಬಸ್ ಬಂಡೆಗೇಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular