ನವದೆಹಲಿ: ವಿಧಾನಸಭಾ ಚುನವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿವಾಸದಲ್ಲಿ ಟಿಕೆಟ್ ಫೈನಲ್ ವಿಚಾರವಾಗಿ ಅಂತಿಮ ಹಂತದ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಕುರಿತು ಮಹತ್ವದ ಮಾತುಕತೆಗಳು ನಡೆದಿವೆ. ಬಿಜೆಪಿಯ ಹಾಲಿ 8 ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಸರ್ವೆಯಲ್ಲಿ ನೆಗೆಟಿವ್ ವರದಿ ಬಂದಿರುವ ಕಾರಣಕ್ಕೆ 8 ಹಾಲಿ ಶಾಸಕರಿಗೆ ಬಿಜೆಪಿ ಕೊಕ್ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.