HomeIndiaBREAKING NEWS: ಕೇಂದ್ರ ಸಚಿವ ಕಿರಣ್ ರಿಜಿಜು ಕಾರ್ ಅಪಘಾತ; ಅದೃಷ್ಟವಶಾತ್ ಪಾರು

BREAKING NEWS: ಕೇಂದ್ರ ಸಚಿವ ಕಿರಣ್ ರಿಜಿಜು ಕಾರ್ ಅಪಘಾತ; ಅದೃಷ್ಟವಶಾತ್ ಪಾರು

ನವದೆಹಲಿ: ಜಮ್ಮು ಮತತ್ಉ ಕಾಶ್ಮೀರದ ಬನಿಹಾಲ್ ಪ್ರದೇಶದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರ್ ಸಣ್ಣ ಅಪಘಾತಕ್ಕೆ ಒಳಗಾಗಿದೆ

ಇಂದು ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಸಚಿವ ಕಿರಣ್ ರಿಜಿಜು, ಎಡಿಜಿ ಮುಖೇಶ್ ಸಿಂಗ್ ಸೇರಿ ಎಲ್ಲರೂ ಸುರಕ್ಷಿತವಾಗಿದ್ದಾರೆ. ರಸ್ತೆ ಅಪಘಾತದಲ್ಲಿ ಯಾವುದೇ ಗಾಯಗಳಾಗಿಲ್ಲ. ಇದು ಸಣ್ಣ ಅಪಘಾತವಾಗಿದೆ. ಯಾವುದೇ ತೊಂದರೆ ಇಲ್ಲ. ಕಾನೂನು ಸಚಿವರು ಹಿಂತಿರುಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಚಿವ ಕಿರಣ್ ರಿಜಿಜು ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಅವರು ರಸ್ತೆ ಅಪಘಾತದಿಂದ ಪಾರಾಗಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular