ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವ ವಿಶ್ವಾಸದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ನಲ್ಲಿ ಇನ್ನೂ ಹಲವರು ಸಿಎಂ ರೇಸ್ ನಲ್ಲಿದ್ದಾರೆ.
ಆದರೆ ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಹೊಸ ದಾಳ ಉರುಳಿಸಿದ್ದಾರೆ. ಈ ಮೂಲಕ ಸಿಎಂ ಹುದ್ದೆ ಆಕಾಂಕ್ಷಿಗಳಲ್ಲಿ ತಳಮಳ ಹೆಚ್ಚಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಯಸಿದರೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಿದ್ದರಿದ್ದೇವೆ. ನಾನು ನನ್ನ ಅವಕಾಶ ಬಿಟ್ಟುಕೊಟ್ಟು ಅವರ ಕೆಳಗೆ ಕೆಲಸ ಮಾಡಲು ಸಿದ್ಧವಾಗಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮೂಲಕ ಹೊಸ ದಾಳ ಉರುಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಎಐಸಿಸಿ ಹುದ್ದೆಯವರೆಗೆ ಹೋದ ನಾಯಕ ಮಲ್ಲಿಕಾರ್ಜುನ ಖರ್ಗೆ. ಎಂದಿಗೂ ಪಕ್ಷ ನಿಷ್ಠೆ ಬಿಟ್ಟಿಲ್ಲ. ರಾಜ್ಯಕ್ಕೆ ಅವರ ಸೇವೆ ಅಗತ್ಯವಾಗಿದೆ. ಅವರ ವಿಚಾರದಲ್ಲಿ ಪಕ್ಷ ತೆಗೆದುಕೊಳ್ಳುವ ನಿರ್ಧಾರ ಪಾಲಿಸಲು ನಾವು ಸಿದ್ಧವಾಗಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.