HomeKarnatakaBIG NEWS: ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ಮೋದಿ ಸಫಾರಿ ಆರಂಭ

BIG NEWS: ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ಮೋದಿ ಸಫಾರಿ ಆರಂಭ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಸಫಾರಿ ಆರಂಭಿಸಿದ್ದಾರೆ.

ಮೇಲುಕಾಮನಹಳ್ಳಿ ಹೆಲಿಪ್ಯಾಡ್ ಗೆ ಬಂದಿಳಿದ ಪ್ರಧಾನಿ ಮೋದಿ ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ಬಂಡಿಪುರ ಕ್ಯಾಂಪ್ ಗೆ ಆಗಮಿಸಿದರು. ಈ ವೇಳೆ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿದರು. ಬಳಿಕ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದರು.

ಬಳಿಕ ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ಮೋದಿ ಸಫಾರಿ ಆರಂಭಿಸಿದ್ದಾರೆ. ಉದ್ಯಾನವನದಲ್ಲಿ ಸುಮಾರು 2 ತಾಸುಗಳ ಕಾಲ ಸುಮಾರು 20 ಕೀಮೀ ವರೆಗೆ ಸಫಾರಿಯಲ್ಲಿ ಸಂಚರಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular