
ಹೆಚ್.ಆರ್.ಶ್ರೀನಾಥ್ ಮನೆಗೆ ಭೇಟಿ ನೀಡಿದ ಜನಾರ್ಧನ ರೆಡ್ಡಿ, ತಮ್ಮ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಗಂಗಾವತಿಯಿಂದ ಕಾಂಗ್ರೆಸ್ ಇಕ್ಬಾಲ್ ಅನ್ಸಾರಿಗೆ ಟಿಕೆಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಶ್ರೀನಾಥ್ ಅವರಿಗೆ ಟಿಕೆಟ್ ಕೈ ತಪ್ಪಿದೆ.
ಇದರ ಬೆನ್ನಲ್ಲೇ ಶ್ರೀನಾಥ್ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಸಿಡಿದೆದಿದ್ದರು. ಇದೀಗ ನಿನ್ನೆ ಬಿಜೆಪಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ್ ದಡೇಸೂಗೂರು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ ಜನಾರ್ಧನ ರೆಡ್ಡಿ ಕೂಡ ಶ್ರೀನಾಥ್ ಭೇಟಿಯಾಗಿ ತಮ್ಮ ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ.

