HomeKarnatakaBIG NEWS: ಮೊದಲು BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗ್ಲಿ; ನಂತ್ರ 3ನೇ ಪಟ್ಟಿ ಎಂದ ಡಿ.ಕೆ.ಶಿವಕುಮಾರ್

BIG NEWS: ಮೊದಲು BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗ್ಲಿ; ನಂತ್ರ 3ನೇ ಪಟ್ಟಿ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಬಾಕಿಯಿದ್ದು, ರಾಜ್ಯ ಬಿಜೆಪಿ ಇನ್ನೂ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಿಸುವ ನಿಟ್ಟಿನಲ್ಲಿ ಸಭೆ ಮೇಲೆ ಸಭೆ ನಡೆಸುತ್ತಿದೆ. ವಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ 2 ಪಟ್ಟಿ ಈಗಾಗಲೆ ಬಿಡುಗಡೆ ಮಾಡಿದ್ದು, ಮೂರನೇ ಪಟ್ಟಿ ಬಿಡುಗಡೆಗೆ ಕಾದುನೋಡುವ ತಂತ್ರ ಅನುಸರಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ವಿಚಾರವಾಗಿ, ಮೊದಲು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಯಾವಾಗ ಬಿಡುಗಡೆಯಾಗಲಿದೆ ಎಂದು ಕೇಳಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿ. ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

ಈ ನಡುವೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ತಮ್ಮ ಬೆಂಬಲಿಗರೊಂದಿಗೆ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸುತ್ತಿದ್ದು, ಟಿಕೆಟ್ ಗಾಗಿ ಒತ್ತಡ ಹೇರುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular