HomeKarnatakaBIG NEWS: ಪ್ರಧಾನಿ ಮೋದಿ ಸಫಾರಿಗೆ HDK ವ್ಯಂಗ್ಯ; ಸಚಿವ ಅಶ್ವತ್ಥ ನಾರಾಯಣ ತಿರುಗೇಟು

BIG NEWS: ಪ್ರಧಾನಿ ಮೋದಿ ಸಫಾರಿಗೆ HDK ವ್ಯಂಗ್ಯ; ಸಚಿವ ಅಶ್ವತ್ಥ ನಾರಾಯಣ ತಿರುಗೇಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ ವಿಚಾರಕ್ಕೆ ವ್ಯಂಗ್ಯವಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಚಿವ ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅರಣ್ಯ ವೀಕ್ಷಣೆಗೆ ಹೋದಾಗ ಯಾವ ರೀತಿಯ ಡ್ರೆಸ್ ಹಾಕಬೇಕು, ನಾಡಿಗೆ ಬಂದಾಗ ಯಾವ ರೀತಿಯ ಬಟ್ಟೆ ಧರಿಸಬೇಕು ಎಂಬುದುದು ಗೊತ್ತಿರಬೇಕು. ಆದರೆ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಇವೆರಡೂ ಗೊತ್ತಿಲ್ಲ ಎಂದು ಟಾಂಗ್ ನೀಡಿದರು.

ಪ್ರಧಾನಿ ಮೋದಿ ಯಾವ ಸ್ಥಳ, ಪ್ರದೇಶಕ್ಕೆ ಭೇಟಿ ನೀಡುತ್ತಾರೋ ಆ ಸ್ಥಳಕ್ಕೆ ಸೂಕ್ತವಾಗುವಂತಹ ಬಟ್ಟೆಯನ್ನು ಮೋದಿ ಧರಿಸುತ್ತಾರೆ. ಇಡೀ ವಿಶ್ವವನ್ನೇ ನಾವು ಪ್ರತಿನಿಧಿಸುತ್ತಿದ್ದೇವೆ. 140 ಕೋಟಿ ಜನಕ್ಕೆ ನಾಯಕ ಅವರು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular